ರಾಂಚಿ: ಕಟ್ಟಿಕೊಂಡ ಗಂಡ ಬೇರೆಯವಳೊಂದಿಗೆ ಜೀವನ ನಡೆಸುತ್ತಿದ್ದಾನೆ ಎಂಬ ಶಂಕೆಯಿಂದಾಗಿ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾರ್ಖಂಡ್ನ ಅಗರ್ತಲಾದಲ್ಲಿ ನಡೆದಿದೆ.
28 ವರ್ಷದ ಮನೀಷಾ ಗೋಪ್ ಕಳೆದ ಕೆಲ ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈಗಾಗಲೇ ಮೂವರು ಮಕ್ಕಳಿದ್ದಾರೆ. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ಬೇರೆ ಮಹಿಳೆ ಜತೆ ಸಂಸಾರ ನಡೆಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಒಬ್ಬ ಮಹಿಳೆ ಬಾವಿಯಿಂದ ನೀರು ತೆಗೆದುಕೊಂಡು ಬರಲು ತೆರಳಿದಾಗ ಮೃತದೇಹ ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.