ಬಾರ್ಮೆರ್(ರಾಜಸ್ಥಾನ):ಐವರು ಹೆಣ್ಣು ಮಕ್ಕಳೊಂದಿಗೆ ತಾಯಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಬಾರ್ಮೆರ್ ಜಿಲ್ಲೆಯಲ್ಲಿ ನಡೆದಿದೆ.
ಐವರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ! - ಆತ್ಮಹತ್ಯೆಗೆ ಶರಣು
ತಾಯಿಯೋರ್ವಳು ತನ್ನ ಐವರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ತನ್ನ ಐವರು ಹೆಣ್ಣು ಮಕ್ಕಳನ್ನ ನೀರಿನ ಟ್ಯಾಂಕ್ಗೆ ತಳ್ಳಿರುವ ಮಹಿಳೆ ತದನಂತರ ತಾನೂ ಜಿಗಿದಿದ್ದಾಳೆ. ಪರಿಣಾಮ ಎಲ್ಲರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚೋಹ್ತಾನ್ ನಗರ ಪೊಲೀಸರು ಭೇಟಿ ನೀಡಿ, ಶವಗಳನ್ನ ಹೊರತೆಗೆಯುವ ಕಾರ್ಯ ಮಾಡಿದ್ದಾರೆ. ಒಂದೇ ಕುಟುಂಬದ ಎಲ್ಲರೂ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಗ್ರಾಮದಲ್ಲಿ ಆತಂಕ ಸೃಷ್ಠಿಯಾಗಿದ್ದು, ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎನ್ನುವ ಚರ್ಚೆಯಲ್ಲಿ ತೊಡಗಿದ್ದಾರೆ.
ಈಗಾಗಲೇ ಐವರು ಮಕ್ಕಳು ಹಾಗೂ ತಾಯಿಯ ಮೃತದೇಹ ಹೊರತೆಗೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲು ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.