ಮುಂಬೈ:ಗರ್ಭಿಣಿಯೋರ್ವಳು ಚಲಿಸುತ್ತಿದ್ದ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾರಾಷ್ಟ್ರದ ಮುಂಬೈನಲ್ಲಿ ಘಟನೆ ನಡೆದಿದ್ದು, ಲೋಕಲ್ ರೈಲಿನಲ್ಲಿ ಮಗುವಿನ ಜನನವಾಗಿದೆ.
ಚಲಿಸುತ್ತಿದ್ದ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ - ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್
ಗರ್ಭಿಣಿಯೋರ್ವಳು ಚಲಿಸುತ್ತಿದ್ದ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾರಾಷ್ಟ್ರದ ಮುಂಬೈನ ಲೋಕಲ್ ರೈಲಿನಲ್ಲಿ ಘಟನೆ ನಡೆದಿದೆ.
ಮಗುವಿಗೆ ಜನ್ಮ ನೀಡಿದ ಮಹಿಳೆ
ಮಂಗಳ ಕಿಶೋರ್ ಕಾಲೆ ಎಂಬ ಗರ್ಭಿಣಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಿಂದ ಥಾಣೆಗೆ ತೆರಳುತ್ತಿದ್ದಳು. ಈ ವೇಳೆ ಆಕೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಥಾಣೆ ಸಮೀಪ ರೈಲು ತೆರಳುತ್ತಿದ್ದಾಗ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ನಂತರ ಆಕೆಯನ್ನು ಚಿಕಿತ್ಸೆಗಾಗಿ ಥಾಣೆ ರೈಲ್ವೆ ನಿಲ್ದಾಣದಲ್ಲಿರುವ ರೈಲ್ವೆಯ ಒಂದು ರೂಪಾಯಿ ಚಿಕಿತ್ಸಾಲಯಕ್ಕೆ ಕರೆತರಲಾಯಿತು. ಬಳಿಕ ತಾಯಿ, ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.