ಪಾಟ್ನಾ :ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಗರ್ಭಿಣಿಯೊಬ್ಬಳು ಎನ್‌ಡಿಆರ್‌ಎಫ್ ತಂಡದ ರಕ್ಷಣಾ ದೋಣಿಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಗೋಬಾರಿ ಗ್ರಾಮದ ತನ್ನ ಮನೆಯಲ್ಲಿದ್ದ ಗರ್ಭಿಣಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಳು. ಈ ವೇಳೆ ಎನ್‌ಡಿಆರ್‌ಎಫ್ ಸಿಬ್ಬಂದಿ ತಮ್ಮ ರಕ್ಷಣಾ ದೋಣಿಯಲ್ಲಿ ಬುರ್ಹಿ ಗಂಡಕ್ ನದಿಯಲ್ಲಿ ಮಹಿಳೆಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತಿದ್ದರು. ಆ ವೇಳೆ ಆಕೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಧ್ಯಾಹ್ನ 1:40ರ ಸುಮಾರಿಗೆ ಹೆರಿಗೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.