ಇಂದೋರ್(ಮಧ್ಯಪ್ರದೇಶ):ಯುವತಿಯೋರ್ವಳ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದ್ದು, ಎಲ್ಲ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ... ಆರು ಕಾಮುಕರ ಬಂಧನ
ಸಮಸ್ಯೆ ಬಗೆಹರಿಸುವುದಾಗಿ ನಂಬಿಸಿ ಕರೆದುಕೊಂಡು ಹೋಗಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರಗೈದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಜೂನ್ 2ರಂದು ಈ ಘಟನೆ ನಡೆದಿದ್ದು, ಯುವತಿ ಮೊಬೈಲ್ ಫೋನ್ಗೆ ವ್ಯಕ್ತಿಯೋರ್ವ ಕರೆ ಮಾಡಿ ಕಿರುಕುಳ ನೀಡ್ತಿದ್ದನು. ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಮತ್ತೋರ್ವ ವ್ಯಕ್ತಿ ಆಕೆಯನ್ನ ಕರೆದುಕೊಂಡು ಹೋಗಿದ್ದಾನೆ. ವ್ಯಕ್ತಿಯನ್ನ ನಂಬಿ ಹೋಗಿದ್ದ ಆಕೆಯನ್ನ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಐವರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪ್ರಕರಣದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದಾರೆ ಎಂದು ವಿಜಯ್ ನಗರ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನ ಗೋಪಾಲ್, ಲಕ್ಕಿ, ಲಖನ್, ಭುವನೇಶ್, ಮನೀಷ್ ಹಾಗೂ ಅಮನ್ ಎಂದು ಗುರುತಿಸಲಾಗಿದ್ದು, ಈಗಾಗಲೇ ಇವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.