ನವದೆಹಲಿ:ಪಶ್ಚಿಮ ದೆಹಲಿಯ ನಿಹಾಲ್ ವಿಹಾರದ ನಿವಾಸವೊಂದರಲ್ಲಿ 28 ವರ್ಷದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಪ್ರೀತಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುತ್ತಿಗೆದಾರನಾಗಿರುವ ಪತಿಯೇ ಈ ಹತ್ಯೆಯ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ನಡುವೆ ಪತ್ನಿ ಸಾವಿನ ಬಳಿಕ ಪತಿ ಕಾಣೆಯಾಗಿದ್ದಾನೆ. ವಿಷಯ ತಿಳಿದು ಮನೆಗೆ ತೆರಳಿದಾಗ ಪೊಲೀಸರಿಗೆ ಮಹಿಳೆ ಮತ್ತು ಆಕೆಯ ಮಕ್ಕಳು ಹಾಸಿಗೆಯ ಮೇಲೆ ಅಸುನೀಗಿದ್ದು ಕಂಡು ಬಂದಿದೆ. ಅವರನ್ನ ಸುತ್ತಿಗೆಯಿಂದ ಹೊಡೆದು ಸಾಯಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಂಡ - ಹೆಂಡತಿ ನಡುವೆ ಆಗಾಗ್ಗ ಜಗಳ ನಡೆಯುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.