ಕರ್ನಾಟಕ

karnataka

ETV Bharat / bharat

ಸುರಕ್ಷತೆ ಕಾರಣ ನೀಡಿ ಐಎಎಸ್​​ ಹುದ್ದೆಗೆ ರಾಜೀನಾಮೆ ನೀಡಿದ ಮಹಿಳಾ ಅಧಿಕಾರಿ! - ರಾಣಿ ನಗರ್​​

2014ರ ಐಎಎಸ್​ ಬ್ಯಾಚ್​ನ ಮಹಿಳಾ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಸುರಕ್ಷತೆ ಕಾರಣದಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

Woman IAS officer from Haryana cadre resigns
Woman IAS officer from Haryana cadre resigns

By

Published : May 5, 2020, 5:44 PM IST

ಚಂಡೀಗಢ:ದೇಶಾದ್ಯಂತ ಮಹಾಮಾರಿ ಕೊರೊನಾ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ವೈಯಕ್ತಿಕ ಸುರಕ್ಷತೆಯ ಕಾರಣ ನೀಡಿರುವ ಮಹಿಳಾ ಎಐಎಸ್​ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

2014 ಐಎಎಸ್​ ಬ್ಯಾಚ್​ನ ಅಧಿಕಾರಿಯಾಗಿರುವ ರಾಣಿ ನಗರ್​​ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಕೆ ಮಾಡಿ ಪ್ರಧಾನಿ ಮೋದಿ, ಹರಿಯಾಣ ಗವರ್ನರ್​, ಹಾಗೂ ಮುಖ್ಯಮಂತ್ರಿಗೆ ಇ-ಮೇಲ್​ ಮಾಡಿದ್ದಾಗಿ ಹೇಳಿದ್ದಾರೆ. ಹರಿಯಾಣ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಹೆಚ್ಚುವರಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ರಾಜೀನಾಮೆ ಪತ್ರವನ್ನ ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶಾನಿ ಆನಂದ್ ಅರೋರಾ ಅವರಿಗೆ ನೀಡಿದ್ದು, ಕೇಂದ್ರ ಸರ್ಕಾರದ ಪ್ರಾಧಿಕಾರಕ್ಕೆ ರವಾನಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯ ಆತಂಕದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದು, ಐಎಎಸ್ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಫೇಸ್​ಬುಕ್​​ನಲ್ಲಿ ಹೇಳಿಕೊಂಡಿದ್ದಾರೆ.

ದೇಶದಲ್ಲಿ ಲಾಕ್​ಡೌನ್ ಜಾರಿಯಾದ ಬಳಿಕ ಫೇಸ್​ಬುಕ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಅಧಿಕಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಕೊಂಡಿದ್ದರು.

ABOUT THE AUTHOR

...view details