ಬಾರ್ಮರ್(ರಾಜಸ್ಥಾನ): ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಾಯಿ - ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
30 ವರ್ಷದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಬಾರ್ಮರ್ನಲ್ಲಿ ನಡೆದಿದೆ.
ಖರಾ ಮಹೇಚನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲ್ವರೂ ನೀರಲ್ಲಿ ಮುಳುಗಿ ಹೋಗಿದ್ದಾರೆ. ಮೃತರನ್ನು ಪಪ್ಪು ದೇವಿ (30) ಮತ್ತು ಆಕೆಯ ಮಕ್ಕಳಾದ ಕವಿತಾ (6), ಮನೀಶ್ (4) ಮತ್ತು ಸುರೇಶ್ (2) ಎಂದು ಗುರುತಿಸಲಾಗಿದೆ. ಮಹಿಳೆಯ ಹಿರಿಯ ಮಗಳು ಅಜ್ಜಿಯೊಂದಿಗೆ ಇದ್ದುದರಿಂದ ಬದುಕು ಉಳಿದಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಆದರೆ, ಮಹಿಳೆ ತನ್ನ ಗಂಡನೊಂದಿಗಿನ ಜಗಳದಿಂದಾಗಿ ಇಂತಾ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ.