ಕರ್ನಾಟಕ

karnataka

ETV Bharat / bharat

ಗಡಿಯಲ್ಲಿ ಗುಂಡಿನ ಚಕಮಕಿ: ಮಹಿಳೆ ಸಾವು​​, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ - 2 CRPF personnel injured in Srinagar encounter

ಬಟಮಾಲೂ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದು, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Woman killed, 2 CRPF personnel injured in Srinagar encounter with militants
ಬಟಮಾಲೂ ಪ್ರದೇಶದಲ್ಲಿ ಗುಂಡಿನ ಚಕಮಕಿ; ಮಹಿಳೆ ಸಾವು​​, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

By

Published : Sep 17, 2020, 8:44 AM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಶ್ರೀನಗರದ ಬಟಮಾಲೂ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದು, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ಮಾಹಿತಿ ತಿಳಿದ ಕೂಡಲೇ ಭದ್ರತಾ ಪಡೆಗಳು ಮುಂಜಾನೆ 2.30ರ ಸುಮಾರಿಗೆ ಬಟಮಾಲೂನ ಫಿರ್ದೌಸಾಬಾದ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ. ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಬಳಿಕ ಎನ್​ಕೌಂಟರ್​ ನಡೆದಿದೆ.

ಈ ಗುಂಡಿನ ಚಕಮಕಿಯಲ್ಲಿ ಅಸುನೀಗಿದ ಮಹಿಳೆಯನ್ನು ಕೌನ್ಸರ್ ರಿಯಾಜ್ ಎಂದು ಗುರುತಿಸಲಾಗಿದೆ. ಈ ವೇಳೆ ಅಧಿಕಾರಿ ಸೇರಿದಂತೆ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details