ಮುಜಾಫರ್ನಗರ (ಉತ್ತರ ಪ್ರದೇಶ): ಇಲ್ಲಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ 25 ವರ್ಷದ ಮಹಿಳೆಗೆ ಇಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆಕ್ಅಪ್ ವೇಳೆ ಮಹಿಳೆಗೆ ಇಬ್ಬರು ವೈದ್ಯರಿಂದ ಲೈಂಗಿಕ ಕಿರುಕುಳ - Woman sexually assaulted by two doctors during check-up in UP
ಆಸ್ಪತ್ರೆಯಲ್ಲಿ 25 ವರ್ಷದ ಮಹಿಳೆಗೆ ಚಿಕಿತ್ಸೆ ನೀಡುವ ವೇಳೆ ವೈದ್ಯರಿಬ್ಬರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.
ಲೈಂಗಿಕ ಕಿರುಕುಳ
ಶುಕ್ರವಾರ ಮಹಿಳೆ ಆಸ್ಪತ್ರೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಇಬ್ಬರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಅಶೋಕ್ ಕುಮಾರ್ ಹಾಗೂ ಅಖಿಲ್ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ತಾಯಿ ಮತ್ತು ಸಹೋದರನೊಂದಿಗೆ ಆಸ್ಪತ್ರೆಗೆ ತೆರಳಿದ್ದರು.