ಕೋಲ್ಕತ್ತ (ಪಶ್ಚಿಮ ಬಂಗಾಳ): ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಕಾರಿನಲ್ಲಿ ಮನೆಗೆ ವಾಪಸ್ ಆಗುತ್ತಿದ್ದ ಯುವತಿ ಮೇಲೆ ಆಕೆಯ ಇಬ್ಬರು ಸ್ನೇಹಿತರೇ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಸೌಥ್ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಇಬ್ಬರು ಸ್ನೇಹಿತರಿಂದಲೇ ಯುವತಿಗೆ ಲೈಂಗಿಕ ಕಿರುಕುಳ ಆರೋಪ - ದಕ್ಷಿಣ 24 ಪರಗಣ
ಬರ್ತ್‌ಡೇ ಪಾರ್ಟಿ ಕೊಡಿಸುವ ನೆಪದಲ್ಲಿ ಯುವತಿಯನ್ನು ಕರೆದೊಯ್ದು ಇಬ್ಬರು ಸ್ನೇಹಿತರು ಆಕೆಯ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿರುವ ಘಟನೆ ಪಶ್ಚಿಮ ಬಂಗಾಳದ ಸೌಥ್ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧ ಜಾಧವ್‌ಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ತಡರಾತ್ರಿ ದಕ್ಷಿಣ 24 ಪರಗಣ ಜಿಲ್ಲೆಯ ಮಹೇಶ್‌ಸ್ಥಳ ಎಂಬಲ್ಲಿ ಪಾರ್ಟಿ ಮುಗಿಸಿ ಬರುತ್ತಿದ್ದ 21 ವರ್ಷದ ಯುವತಿಗೆ ಆಕೆಯ ಇಬ್ಬರು ಸ್ನೇಹಿತರು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ಕಾರಿನಲ್ಲಿ ಓರ್ವ ಮಹಿಳೆಯೂ ಇದ್ದರು ಎಂದಿದ್ದಾರೆ.
ಜೋರಾಗಿ ಕಿರುಚಿದ ಪರಿಣಾಮ ಕಾರಿನಿಂದ ಹೊರ ತಳ್ಳಿದ್ದಾರೆ. ರಾತ್ರಿ 11 ಗಂಟೆಗೆ ಸಂತ್ರಸ್ತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ದೂರು ಆಧರಿಸಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.