ಮುಜಾಫರ್ನಗರ(ಯುಪಿ):ಮಹಿಳಾ ಸಬ್ ಇನ್ಸ್ಪೆಕ್ಟರ್ ಮೇಲೆ ಇನ್ಸ್ಪೆಕ್ಟರ್ವೋರ್ವ ಅತ್ಯಾಚಾರವೆಸಗಿರುವ ಆರೋಪ ಪ್ರಕರಣ ಉತ್ತರಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಮಹಿಳಾ ಎಸ್ಐ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ನಿಂದ ಅತ್ಯಾಚಾರ ಆರೋಪ! - ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಚೌಹಾಣ್
ಅತ್ಯಾಚಾರ, ದೌರ್ಜನ್ಯಕ್ಕೊಳಗಾಗುವ ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸ್ವೋರ್ವ ಹೀನ ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮೇಲೆ ಇನ್ಸ್ಪೆಕ್ಟರ್ ಅತ್ಯಾಚಾರವೆಸಗಿರುವ ಕುರಿತು ಉತ್ತರ ಪ್ರದೇಶದಲ್ಲಿ ದೂರು ದಾಖಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಇನ್ಸ್ಪೆಕ್ಟರ್ ಈ ಕೃತ್ಯವೆಸಗಿರುವುದಾಗಿ ಮಹಿಳಾ ಎಸ್ಐ ಮಿರಾನ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಘಾಜಿಯಾಬಾದ್ನ ಭೋಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಮಹಿಳಾ ಎಸ್ಐಗೆ ಈಗಾಗಲೇ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಚೌಹಾಣ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್ ಎನ್ ಸಿಂಗ್ ತಿಳಿಸಿದ್ದಾರೆ.
ಮಿರಾನ್ಪುರ್ ನಿವಾಸಿಯಾಗಿರುವ ಮಹಿಳಾ ಎಸ್ಐ ಈಗಾಗಲೇ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಚೌಹಾಣ್ಗೆ 5 ಲಕ್ಷ ನಗದು ಹಣ ಹಾಗೂ ನಿಶ್ಚಿತಾರ್ಥದ ಹೆಸರಿನಲ್ಲಿ ಗಿಫ್ಟ್ ಕೂಡ ನೀಡಿದ್ದಾಗಿ ತಿಳಿದು ಬಂದಿದೆ. ಮಾಹಿತಿ ಪ್ರಕಾರ ಇವರಿಬ್ಬರ ಮದುವೆ ಬರುವ ಏಪ್ರಿಲ್ ತಿಂಗಳ 21ರಂದು ನಡೆಯಬೇಕಾಗಿತ್ತು. ಆದರೆ ಎಸ್ಐ ಜತೆ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ಆತ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮಹಿಳಾ ಎಸ್ಐ ದೂರು ನೀಡಿದ್ದಾರೆ.