ಕರ್ನಾಟಕ

karnataka

ETV Bharat / bharat

ಮಗುಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ - ಬನ್ಸ್ವಾರಾ ಆತ್ಮಹತ್ಯೆ ಪ್ರಕರಣ

ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದು ತಾನು ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆಯ ಪತಿ ಅಕ್ರಮ ಸಂಬಂಧ ಹೊಂದಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

suicide
suicide

By

Published : Jul 16, 2020, 10:26 AM IST

ಬನ್ಸ್​​ವಾರ(ರಾಜಸ್ಥಾನ): ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗುವನ್ನು ಕೊಂದು ತಾನು ಕೂಡಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬನ್ಸ್​ವಾರದಲ್ಲಿ ನಡೆದಿದೆ.

ಕುಟುಂಬಸ್ಥರು ಮನೆಗೆ ತಲುಪುವ ಹೊತ್ತಿಗೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದರು. ಮಹಿಳೆಯ ಪತಿ ಅಕ್ರಮ ಸಂಬಂಧ ಹೊಂದಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಸ್ತುತ ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಅಬಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಮನೀಷಾ (25) ಎಂದು ಗುರುತಿಸಲಾಗಿದೆ.

ABOUT THE AUTHOR

...view details