ಲಕ್ನೋ (ಉತ್ತರಪ್ರದೇಶ): ಅಯೋಧ್ಯೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ಕೇಂದ್ರ ಸರ್ಕಾರ ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಿದೆ. ಈ ಜಾಗದಲ್ಲಿ ಭವ್ಯ ಮಸೀದಿ ನಿರ್ಮಿಸಲು ನಿರ್ಧರಿಸಲಾಗಿದೆ.
ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಯೋಗಿ ಆದಿತ್ಯನಾಥ್, "ನಾನು ವಾದಿಯೂ ಅಲ್ಲ, ಪ್ರತಿವಾದಿಯೂ ಅಲ್ಲ. ಹೀಗಾಗಿ ಅವರು ನನ್ನನ್ನು ಆಹ್ವಾನಿಸುವುದಿಲ್ಲ. ಒಂದು ವೇಳೆ ಕಾರ್ಯಕ್ರಮಕ್ಕೆ ಆಹ್ವಾನ ಬಂದರೆ ಭಾಗಿಯಾಗುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.