ಕೋಲ್ಕತ್ತಾ:ಸಿಎಎ ವಿರೋಧಿ ಪ್ರತಿಭಟನೆಗಳು ಹಲವಾರು ವಿವಿಗಳು ಮುಂದುವರೆದಿದ್ದು, ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ
ಕೋಲ್ಕತ್ತಾದಲ್ಲಿ ಮಾತನಾಡಿದ ಅವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸಲು ಯಾರಾದರೂ ಸ್ವತಂತ್ರರು. ಆದರೆ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಅಂತಹ ಚಟುವಟಿಕೆಗಳ ವ್ಯಾಪ್ತಿಯಿಂದ ಹೊರಗಿಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆದರೆ ಯಾವುದೇ ಕಾರಣಕ್ಕೂ ಮೋದಿ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.