ಕಾಂಚೀಪುರಂ/ತಮಿಳುನಾಡು:ಕಾಂಚೀಪುರಂ ಸಮೀಪದ ಉತಿರಾಮೇರು ಗ್ರಾಮದ ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಗಾತ್ರದ ಕಲ್ಲುಗಳು ಉರುಳಿ ಬಿದ್ದ ಹಿನ್ನೆಲೆ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ವಾರಿಯಲ್ಲಿ ಉರುಳಿದ ಕಲ್ಲುಗಳು: ಕಾರ್ಮಿಕ ಸಾವು, ಇಬ್ಬರ ಸ್ಥಿತಿ ಗಂಭೀರ - ಕಲ್ಲು ಗಣಿಗಾರಿಕೆ
ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಬೃಹತ್ ಗಾತ್ರದ ಕಲ್ಲುಗಳು ಉರುಳಿ ಬಿದ್ದ ಹಿನ್ನೆಲೆ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಸಮೀಪದ ಉತಿರಾಮೇರು ಗ್ರಾಮದ ಕಲ್ಲು ಗಣಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಒಟ್ಟು 11 ಜನರಿದ್ದರು. ಮಣಿಕಂದನ್ ಮೃತ ವ್ಯಕ್ತಿ. ಗಾಯಾಳುಗಳನ್ನು ಚೆಂಗಲ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಉಳಿದ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಇನ್ನು ಕಲ್ಲುಗಳ ಕೆಳಗೆ ಬೇರೆ ಯಾರಾದರೂ ಸಿಲುಕಿಕೊಂಡಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕ್ವಾರಿ ವ್ಯವಸ್ಥಾಪಕರನ್ನು ವಿಚಾರಿಸುತ್ತಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಅವರು ಹೇಳಿದ್ದಾರೆ.