ಕರ್ನಾಟಕ

karnataka

ETV Bharat / bharat

ವಿಶ್ವಾದ್ಯಂತ ಕೊರೊನಾದಿಂದ 1 ಕೋಟಿಗೂ ಅಧಿಕ ಸೋಂಕಿತರು ಗುಣಮುಖ!

ವಿಶ್ವಾದ್ಯಂತ 1.6 ಕೋಟಿ ಜನರು ಕೋವಿಡ್​ ಸುಳಿಯಲ್ಲಿ ಸಿಲುಕಿದ್ದು, ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 44,32,550, ಮೃತರ ಸಂಖ್ಯೆ 1,50,425ಕ್ಕೆ ಏರಿಕೆಯಾಗಿದೆ.

By

Published : Jul 28, 2020, 4:04 PM IST

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ಪ್ರಪಂಚದಾದ್ಯಂತ ಬರೋಬ್ಬರಿ 1,66,29,650 ಮಂದಿಗೆ ಮಹಾಮಾರಿ ಕೊರೊನಾ ಅಂಟಿದ್ದು, 6,55,872 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,02,17,539 ಜನರು ಗುಣಮುಖರಾಗಿದ್ದಾರೆ ಎಂಬುದು ಸಮಾಧಾನಕರ ಸಂಗತಿಯಾಗಿದೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 44,32,550 ಇದ್ದು, ಮೃತರ ಸಂಖ್ಯೆ 1,50,425ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 24,43,480 ಪ್ರಕರಣಗಳು ಹಾಗೂ 87,679 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 14,82,503 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 33,448 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 8,18,120 ಕೇಸ್​ಗಳಿದ್ದು, 13,354 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

ಗ್ಲೋಬಲ್​ ಕೋವಿಡ್​-19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 83,959 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ABOUT THE AUTHOR

...view details