ಹೈದರಾಬಾದ್:ಜಗದಗಲ ಬರೋಬ್ಬರಿ 2,18,17,650 ಜನರಿಗೆ ಮಾರಣಾಂತಿಕ ಕೊರೊನಾ ವೈರಸ್ ಅಂಟಿದ್ದು, 7,72,751 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,45,53,191 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 55,66,600 ಇದ್ದು, ಮೃತರ ಸಂಖ್ಯೆ 1,73,128ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 33,40,197 ಪ್ರಕರಣಗಳು ಹಾಗೂ 1,07,879 ಸಾವುಗಳು ವರದಿಯಾಗಿವೆ.
ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 26,47,316 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 51,045 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,22,853 ಕೇಸ್ಗಳಿದ್ದು, 15,685 ಜನರು ಸಾವನ್ನಪ್ಪಿದ್ದಾರೆ.