ಕರ್ನಾಟಕ

karnataka

ಪ್ರಪಂಚದಲ್ಲಿ 1.7 ಕೋಟಿ ಜನರು ಕೊರೊನಾದಿಂದ ಗುಣಮುಖ

ಕೋವಿಡ್​ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 62,11,796 ಇದ್ದು, ಮೃತರ ಸಂಖ್ಯೆ 1,87,736ಕ್ಕೆ ಏರಿಕೆಯಾಗಿದೆ.

By

Published : Sep 1, 2020, 3:51 PM IST

Published : Sep 1, 2020, 3:51 PM IST

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ಜಾಗತಿಕ ಮಹಾಮಾರಿ ಕೊರೊನಾ ವಿಶ್ವದಾದ್ಯಂತ ಬರೋಬ್ಬರಿ 2,56,34,102 ಜನರಿಗೆ ತಗುಲಿದ್ದು, 8,54,763 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,79,39,176 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 62,11,796 ಇದ್ದು, ಮೃತರ ಸಂಖ್ಯೆ 1,87,736ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 39,10,901 ಪ್ರಕರಣಗಳು ಹಾಗೂ 1,21,515 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 36,87,939 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 65,435 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,95,319 ಕೇಸ್​ಗ​​​ಳಿದ್ದು, 17,176 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಇದೀಗ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,058 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ABOUT THE AUTHOR

...view details