ಕರ್ನಾಟಕ

karnataka

ETV Bharat / bharat

ಕೋವಿಡ್​ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.. ಮತ್ತೆ ಮತ್ತೆ ಎಚ್ಚರಿಸುತ್ತಿದೆ WHO - ವಿಶ್ವ ಆರೋಗ್ಯ ಸಂಸ್ಥೆ

ಎರಡನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 66,82,073 ಹಾಗೂ ಮೃತರ ಸಂಖ್ಯೆ 1,03,600ಕ್ಕೆ ಏರಿಕೆಯಾಗಿದೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 49,40,499 ಪ್ರಕರಣ ಹಾಗೂ 1,46,773 ಸಾವು ವರದಿಯಾಗಿವೆ..

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

By

Published : Oct 6, 2020, 5:21 PM IST

ಹೈದರಾಬಾದ್ ​:ವಿಶ್ವದಲ್ಲಿಕೋವಿಡ್​ ಚೇತರಿಕೆಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಮರಣ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗುತ್ತಿದೆ. ಆದರೂ ಸಹ ನಿರ್ಲಕ್ಷ್ಯ ಬೇಡ, ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೊಂದೇ ಪರಿಹಾರ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತೆ ಎಚ್ಚರಿಸಿದೆ.

ಈವರೆಗೆ ಪ್ರಪಂಚದಲ್ಲಿ 3,56,98,655 ಜನ ಕೋವಿಡ್​ ಬಲೆಗೆ ಸಿಲುಕಿದ್ದು, 10,45,953 ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 2.6 ಕೋಟಿ (2,08,13,150) ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 76,79,644 ಇದ್ದು, ಮೃತರ ಸಂಖ್ಯೆ 2,15,032ಕ್ಕೆ ಏರಿಕೆಯಾಗಿದೆ.

ಎರಡನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 66,82,073 ಹಾಗೂ ಮೃತರ ಸಂಖ್ಯೆ 1,03,600ಕ್ಕೆ ಏರಿಕೆಯಾಗಿದೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 49,40,499 ಪ್ರಕರಣ ಹಾಗೂ 1,46,773 ಸಾವು ವರದಿಯಾಗಿವೆ.

4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 12,25,889 ಕೇಸ್​​ಗಳಿದ್ದು, 21,475 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆ ಕೇಸ್​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್‌ನಿಂದ ಈವರೆಗೆ ಚೀನಾದಲ್ಲಿ 85,482 ಪ್ರಕರಣ ಹಾಗೂ 4,634 ಸಾವು ವರದಿಯಾಗಿವೆ.

ABOUT THE AUTHOR

...view details