ಹೈದರಾಬಾದ್:ಜಗದಗಲ 3,77,46,051 ಜನರು ಕೋವಿಡ್ಗೆ ತುತ್ತಾಗಿದ್ದು, 10,81,435 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ 2,83,47,330 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 79,91,998 ಇದ್ದು, ಮೃತರ ಸಂಖ್ಯೆ 2,19,695ಕ್ಕೆ ಏರಿಕೆಯಾಗಿದೆ.
ಗ್ಲೋಬಲ್ ಕೋವಿಡ್ 19 ಟ್ರ್ಯಾಕರ್ ಕೇಸ್ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 71,19,300 ಕೇಸ್ಗಳು ಪತ್ತೆಯಾಗಿದ್ದು, 1,09,184 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 50,94,979 ಪ್ರಕರಣಗಳು ಹಾಗೂ 1,50,506 ಸಾವುಗಳು ವರದಿಯಾಗಿವೆ.
4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 12,98,718 ಕೇಸ್ಗಳಿದ್ದು, 22,597 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ ಪೀಡಿತ ವಿಶ್ವದ ಟಾಪ್ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.
ಗ್ಲೋಬಲ್ ಕೋವಿಡ್ 19 ಟ್ರ್ಯಾಕರ್ ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್ಗಳು ಮಾತ್ರ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 85,578 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.
ಮೃತರ ಸಂಖ್ಯೆಯಲ್ಲಿ ಪ್ರಪಂಚದಲ್ಲೇ ಐದನೇ ಸ್ಥಾನದಲ್ಲಿರುವ ಇಂಗ್ಲೆಂಡ್ನಲ್ಲಿ ವೇಗವಾಗಿ ವೈರಸ್ ಹರಡುತ್ತಿದ್ದು, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೆಲ ಪ್ರದೇಶಗಳಲ್ಲಿ ಹೆಚ್ಚುವರಿ ನಿರ್ಬಂಧಗಳನ್ನು ಹೇರಲು ಮುಂದಾಗಿದ್ದಾರೆ. ಇನ್ನು ಸಾವಿನ ಸಂಖ್ಯೆಯಲ್ಲಿ ಮೆಕ್ಸಿಕೋ 4ನೇ ಸ್ಥಾನದಲ್ಲಿದೆ.