ಕರ್ನಾಟಕ

karnataka

By

Published : Nov 6, 2020, 6:06 PM IST

ETV Bharat / bharat

ಒಂದು ಕೋಟಿ ಗಡಿಯತ್ತ ಅಮೆರಿಕ ಕೋವಿಡ್​ ಕೇಸ್​..

ಕೋವಿಡ್​ ಕೇಸ್​ಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಒಂದು ಕೋಟಿ ಗಡಿ ತಲುಪುತ್ತಿದೆ..

Worldover corona cases and deaths
ಒಂದು ಕೋಟಿ ಗಡಿಯತ್ತ ಅಮೆರಿಕ ಕೋವಿಡ್​ ಕೇಸ್​

ಹೈದರಾಬಾದ್ ​:ವಿಶ್ವವನ್ನೇ ಸಂಕಷ್ಟಕ್ಕೆ ದೂಡಿ, ಜೀವನದ ಹೊಸ ಪಾಠ ಕಲಿಸಿದ ಕೊರೊನಾ ಈವರೆಗೆ 4,90,31,012 ಜನರಿಗೆ ಕಿಲ್ಲರ್​ ಕೊರೊನಾ ವೈರಸ್​ ಅಂಟಿದೆ. 12,39,608 ಸೋಂಕಿತರು ಮೃತಪಟ್ಟಿದ್ದು, 3,49,83,279 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣ ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಒಂದು ಕೋಟಿ (99,19,522) ಗಡಿ ತಲುಪುತ್ತಿದ್ದು, ಮೃತರ ಸಂಖ್ಯೆ 2,40,953ಕ್ಕೆ ಏರಿಕೆಯಾಗಿದೆ.

ಕೇಸ್​ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 84,11,724 ಕೇಸ್​ಗಳು ಪತ್ತೆಯಾಗಿದ್ದು, 1,25,029 ಜನರು ವೈರಸ್​ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 56,14,258 ಪ್ರಕರಣಗಳು ಹಾಗೂ 1,61,779 ಸಾವು ವರದಿಯಾಗಿವೆ.

4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 17,12,858 ಕೇಸ್​​ಗಳಿದ್ದು, 29,509 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 86,151 ಪ್ರಕರಣ ಹಾಗೂ 4,634 ಸಾವು ವರದಿಯಾಗಿವೆ.

ABOUT THE AUTHOR

...view details