ದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ವೈರಸ್ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕ್ರಮಗಳನ್ನ ಕೈಗೊಂಡಿದೆ. ಈ ಮಧ್ಯೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಹಾಗೂ ಛತ್ತಪುರ್ ಬಳಿಯ ರಾಧ ಸೊಯಾಮಿ ಸತ್ಸಂಗ್ ಆಸ್ಪತ್ರೆಯಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಿಲಾಗಿತ್ತು.
ಇಂಡೋ -ಟಿಬೆಟಿಯನ್ ಪೊಲೀಸರು ನಡೆಸುವ ಕೋವಿಡ್ ಕೇಂದ್ರದಿಂದ ಈವರೆಗೆ 7,000 ಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಐಟಿಬಿಪಿ ಪ್ರಕಟಣೆಯಲ್ಲಿ ತಿಳಿಸಿದೆ.