ಲಖನೌ(ಯುಪಿ):ಕೊರೊನಾ ವೈರಸ್ ತಡೆಯಲು ಕೇಂದ್ರ ಸರ್ಕಾರ ಘೋಷಿಸಿರುವ 21 ದಿನಗಳ ಲಾಕ್‌ಡೌನ್ ಏಪ್ರಿಲ್ 14ರವರೆಗೆ ಮುಂದುವರಿಯಲಿದೆ. ಆದ್ರೆ, ಕಟ್ಟುನಿಟ್ಟಿನ ನಿರ್ಬಂಧದ ನಡುವೆಯೂ ಕೂಡ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ದೇಶದ ಅತಿ ದೊಡ್ಡ ರಾಜ್ಯವಾಗಿರುವ ಉತ್ತರಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಈಗಾಗಲೇ 200ರ ಗಡಿ ದಾಟಿದೆ. ಅನೇಕರು ಇಲ್ಲಿ ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಏಪ್ರಿಲ್ 15ರ ಬಳಿಕ ಹಂತ ಹಂತವಾಗಿ ಲಾಕ್‌ಡೌನ್ ತೆರವು ಮಾಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ.