ಲಕ್ನೋ (ಉತ್ತರ ಪ್ರದೇಶ): ವಲಸೆ ಕಾರ್ಮಿಕರ ಕುರಿತು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಅಮಾನವೀಯ ಧೋರಣೆ ತೋರುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಅಲ್ಲದೆ ಸರ್ಕಾರದ ಅಮಾನವೀಯ ನಡೆಯಿಂದ ಮಾನವೀಯತೆಗೆ ಅಪಮಾನವಾಗಿದೆ ಎಂದು ಕಿಡಿಕಾರಿದ್ದಾರೆ.
ಯೋಗಿ ಸರ್ಕಾರದ ನಡೆಯಿಂದ ವಲಸೆ ಕಾರ್ಮಿಕರ ಪ್ರಾಣಕ್ಕೆ ಕುತ್ತು: ಅಖಿಲೇಶ್ ಯಾದವ್ - ವಲಸೆ ಕಾರ್ಮಿಕರು
ವಲಸಿಗರ ಕುರಿತು ಉತ್ತರ ಪ್ರದೇಶ ಸರ್ಕಾರ ಅಮಾನವೀಯ ಧೋರಣೆ ತೋರುತ್ತಿದೆ ಎಂದು ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.

yogi
ಬಿಜೆಪಿ ಸರ್ಕಾರ ಅಮಾನವೀಯತೆ ಮರೆತಿದೆ. ಉತ್ತರ ಪ್ರದೇಶ ಮಾತ್ರವಲ್ಲದೆ ಇತರ ರಾಜ್ಯಗಳ ವಲಸೆ ಕಾರ್ಮಿಕರು ಕೂಡಾ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಅಖಿಲೇಶ್ ಹೇಳಿದ್ದಾರೆ.
ರಾಜ್ಯದ ಗಡಿಗಳನ್ನು ಮುಚ್ಚಿರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ. ಕಾರ್ಮಿಕರು ಹಸಿವಿನಿಂದ ಬಳಲುತ್ತಿದ್ದು, ತಮ್ಮ ರಾಜ್ಯಗಳಿಗೆ ಮರಳಿ ಹೋಗಲು ಅನುಮತಿ ಕೇಳುತ್ತಿದ್ದಾರೆ. ಆದರೆ ಅವರಿಗೆ ಸೂಕ್ತ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದರು. ಬಿಜೆಪಿ ಸರ್ಕಾರದ ನಿರ್ಧಾರದಿಂದಾಗಿ ವಲಸಿಗರ ಜೀವನ ನರಕವಾಗಿದೆ. ಇದೊಂದು ಅಮಾನವೀಯ ಸರ್ಕಾರ ಎಂದು ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
Last Updated : May 19, 2020, 10:03 AM IST