ಕರ್ನಾಟಕ

karnataka

ETV Bharat / bharat

ದಲಿತರ ಮನೆಗಳಿಗೆ ಬೆಂಕಿ ಹಚ್ಚಿದವರ ವಿರುದ್ಧ ಕೇಸ್​ ದಾಖಲಿಸಲು ಯುಪಿ ಸಿಎಂ ಆದೇಶ - ಎನ್‌ಎಸ್‌ಎ ಪ್ರಕರಣ ದಾಖಲಿಸಲು ಯುಪಿ ಸಿಎಂ ಆದೇಶ

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯ ಸರೈ ಖ್ವಾಜಾ ಪ್ರದೇಶದ ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣ ದಾಖಲಿಸುವಂತೆ ಸಿಎಂ ಯೋಗಿ ಆದಿತ್ಯನಾಥ್​ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Yogi orders NSA against those who burnt Dalit houses
ಎನ್‌ಎಸ್‌ಎ ಪ್ರಕರಣ ದಾಖಲಿಸಲು ಯುಪಿ ಸಿಎಂ ಆದೇಶ

By

Published : Jun 11, 2020, 4:01 PM IST

ಲಕ್ನೋ: ಜೌನ್‌ಪುರ ಜಿಲ್ಲೆಯಲ್ಲಿ ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಆರೋಪಿಗಳಾದ ನೂರ್ ಆಲಂ ಮತ್ತು ಜಾವೇದ್ ಸಿದ್ದಿಕಿ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣ ದಾಖಲಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸಿಎಂ ಆದಿತ್ಯನಾಥ್​, ಎಲ್ಲಾ ಆರೋಪಿಗಳ ವಿರುದ್ಧ ಎನ್‌ಎಸ್‌ಎ ಅಡಿಯಲ್ಲಿ ಪ್ರಕರಣ ದಾಖಲಿಸಿ. ಜೊತೆಗೆ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಘಟನೆಯಲ್ಲಿ ಮನೆ ಕಳೆದುಕೊಂಡ ದಲಿತರಿಗೆ ಮನೆ ಒದಗಿಸಿ ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ತಲಾ ಒಂದು ಲಕ್ಷ ರೂ. ಪರಿಹಾರ ನೀಡಿ ಎಂದು ಆದೇಶಿಸಿದ್ದಾರೆ.

ಮಾವಿನ ಹಣ್ಣು ಕೊಯ್ಯುವ ವಿಚಾರದಲ್ಲಿ ಜಗಳ ನಡೆದು, ಜೂನ್ 9 ರಂದು ಸರೈ ಖ್ವಾಜಾ ಪ್ರದೇಶದ ದಲಿತರ ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು.

ABOUT THE AUTHOR

...view details