ಫರಿದಾಬಾದ್: ಕಾಲೇಜ್ಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಕೆಲ ಯುವಕರು ವಿದ್ಯಾರ್ಥಿನಿಯನ್ನ ಅಡ್ಡಗಟ್ಟಿದ್ದು, ಕಾರಿನೊಳಗೆ ಎಳೆದುಕೊಂಡು ಹೋಗಲು ಯತ್ನಿಸಿದ್ದಾರೆ. ಅದರಲ್ಲಿ ಯಶಸ್ವಿಯಾಗದ ಕಾರಣ ಸ್ಥಳದಲ್ಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹರಿಯಾಣದ ಫರಿದಾಬಾದ್ನಲ್ಲಿ ಈ ಘಟನೆ ನಡೆದಿದ್ದು, ಬಿ.ಕಾಂ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿ ತನ್ನ ಗೆಳತಿಯೊಂದಿಗೆ ಕಾಲೇಜ್ಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕ್ಯಾಂಪಸ್ನಿಂದ ಹೊರಬರುತ್ತಿದ್ದಂತೆ ಯುವಕರಿಬ್ಬರು ಕಾರಿನೊಳಗೆ ಆಕೆಯನ್ನ ಎಳೆದೊಯಲು ಪ್ರಯತ್ನಿಸಿದ್ದಾರೆ. ವಿದ್ಯಾರ್ಥಿನಿ ಅದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ದುಷ್ಕರ್ಮಿ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಇದಾದ ಬಳಿಕ ಕಾರಿನಲ್ಲಿ ಕುಳಿತು ಸ್ಥಳದಿಂದ ಪರಾರಿಯಾಗಿದ್ದಾರೆ.