ಚಂಡೀಗಢ(ಹರಿಯಾಣ): ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಜ್ಯಾಧ್ಯಕ್ಷ ಗುರ್ನಾಮ್ ಸಿಂಗ್ ಚದುನಿ ಅವರನ್ನು ಅಮಾನತುಗೊಳಿಸಲಾಗಿದೆ.
ರಾಜಕೀಯ ಪಕ್ಷಗಳನ್ನು ಭೇಟಿಯಾದ ಆರೋಪದಡಿ ಗುರ್ನಾಮ್ ಸಿಂಗ್ರನ್ನು ಅಮಾನತು ಮಾಡಲಾಗಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡರನ್ನು ಸಿಂಗ್ ಭೇಟಿಯಾಗಿದ್ದರು ಎಂದು ಹೇಳಲಾಗ್ತಿದೆ. ಈ ಬಗ್ಗೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಗುರ್ನಾಮ್ ಸಿಂಗ್ ಸಮಿತಿಯ ಮುಂದೆ ಹಾಜರಾಗಬೇಕಾಗಿದೆ.