ಭೋಪಾಲ್(ಮಧ್ಯಪ್ರದೇಶ):'ನಾನು ವಿಶ್ವಾಸದ್ರೋಹಿ ಅಲ್ಲ' ಸ್ವ ಇಚ್ಛೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದೇನೆಂದು ಕೈ ಮೇಲೆ ಸೊಸೈಡ್ ನೋಟ್ ಬರೆದುಕೊಂಡ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೋಪಾಲ್ನ ಚೋಳ ಮಂದರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಿವಾಹಿತ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಎಡಗೈ ಮೇಲೆ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಅದರಲ್ಲಿ ನಾನು ವಿಶ್ವಾಸದ್ರೋಹಿ ಅಲ್ಲ ಸ್ವಂತ ಇಚ್ಛೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ. ಇದರ ಮಧ್ಯೆ ಗಂಡನ ಪಾಸ್ಪೋರ್ಟ್ ಸೈಜ್ ಫೋಟೋದಲ್ಲಿ ಸಹ ನಾನು ವಿಶ್ವಾಸದ್ರೋಹಿ ಅಲ್ಲ ಎಂದು ಬರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ಪೊಲೀಸ್ ಅಧಿಕಾರಿ ಗಜೇಂದ್ರ ಸಿಂಗ್ ಪ್ರಕಾರ, ಗುಡಿಯಾ ಸಾಹು(35) 2019ರಲ್ಲಿ ಸುಭಾಷ್ ಸಾಹು ಜೊತೆ ಮದುವೆ ಮಾಡಿಕೊಂಡಿದ್ದರು. ಶುಭಾಷ್ ವೃತ್ತಿಯಲ್ಲಿ ಸಂಗೀತ ಶಿಕ್ಷಕರಾಗಿದ್ದು, ಶಾಲೆಯಲ್ಲಿ ಪಾಠ ಮಾಡುತ್ತಾರೆ.