ವಾಷಿಂಗ್ಟನ್(ಅಮೆರಿಕ):ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ, ರಷ್ಯಾ ಪರ ನಿಲುವುಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ರಷ್ಯಾದಿಂದ ಅಂತರ ಕಾಪಾಡಿಕೊಳ್ಳುವಂತೆ ಭಾರತಕ್ಕೆ ಸಲಹೆ ನೀಡಿದೆ.
ಭಾರತವು ಈಗಲೂ ನಿಜವಾಗಿಯೂ ನಮ್ಮ ಭದ್ರತಾ ಪಾಲುದಾರ ರಾಷ್ಟ್ರವಾಗಿದೆ. ನಾವು ಆ ಪಾಲುದಾರಿಕೆಯನ್ನು ಗೌರವಿಸುತ್ತೇವೆ. ರಷ್ಯಾ ಎದುರಿಸುತ್ತಿರುವ ತೀವ್ರ ಟೀಕೆಗಳಿಂದ ಮುಂದೆ ಏನಾಗುತ್ತದೆ ಎಂದು ನಾವು ಭಾವಿಸಬಹುದು. ಭಾರತವು ರಷ್ಯಾದಿಂದ ಮತ್ತಷ್ಟು ದೂರವಿರಲು ಇದು ಉತ್ತಮ ಸಮಯವಾಗಿದೆ ಎಂದು ಅಮೆರಿಕದ ದಕ್ಷಿಣ ಏಷ್ಯಾದ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಡೊನಾಲ್ಡ್ ಲು ಹೇಳಿದ್ದಾರೆ
ಬುಧವಾರ ಸೆನೆಟ್ ಉಪಸಮಿತಿಯಲ್ಲಿ ಮಾತನಾಡಿದ್ದ ಡೊನಾಲ್ಡ್ ಲು ರಷ್ಯಾದ ಆಕ್ರಮಣವನ್ನು ಖಂಡಿಸುವ ಸಾಮೂಹಿಕವಾಗಿ ಖಂಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧಿಕಾರಿಗಳು ಭಾರತದೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.