ಹೈದರಾಬಾದ್ (ತೆಲಂಗಾಣ): ತೆಲಂಗಾಣದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೈದರಾಬಾದ್‌ನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಕೂಡ ಸಾಕಷ್ಟು ಮಳೆಯಾಗುವ ನಿರೀಕ್ಷೆ ಇದೆ.
ಈಗಾಗಲೇ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ಹೈದರಾಬಾದ್ನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಳೆ ನೀರಿನಿಂದ ರಸ್ತೆಗಳು ಕೆರೆಗಳಂತಾಗಿವೆ. ಇಂದು ಸಹ ಮಳೆ ಮುಂದುವರೆದಿದ್ದು, ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಗುರುವಾರ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.