ದರ್ಭಾಂಗ(ಬಿಹಾರ್): ಮನೆ ಕೆಡವಿರುವುದನ್ನು ವಿರೋಧಿಸಿದ್ದಕ್ಕೆ ಒಂದೇ ಕುಟುಂಬದ ಮೂವರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಿನ್ನೆ ರಾತ್ರಿ ದರ್ಭಾಂಗದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: 9 ಮಂದಿ ಬಂಧನ - 3 members of a family burnt alive
ಬಿಹಾರದ ದರ್ಭಾಂಗಾದಲ್ಲಿ ಮನೆ ಕೆಡವಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ ಒಂದೇ ಕುಟುಂಬದ ಮೂವರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧನ
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ದರ್ಭಾಂಗ ನಗರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಸ್‌ಪಿ ಎ.ಕೆ. ಪ್ರಸಾದ್, "ತಮ್ಮ ಮನೆ ಕೆಡವಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ ಒಂದೇ ಕುಟುಂಬದ ಮೂವರು ಸದಸ್ಯರನ್ನು ಸಜೀವ ದಹನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 9 ಮಂದಿಯನ್ನ ಬಂಧಿಸಲಾಗಿದ್ದು, ನಿನ್ನೆ ರಾತ್ರಿ ಇಬ್ಬರನ್ನು ಬಂಧಿಸಿದ್ದೇವೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು.
ಇದನ್ನೂ ಓದಿ:ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರಿಗೆ ಗಾಯ