ಮುಜಾಫ್ಪರ್ಪುರ, ಬಿಹಾರ:ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟ ಘಟನೆ ಬಿಹಾರದ ಮುಜಾಫ್ಪರ್ಪುರದಲ್ಲಿ ಶುಕ್ರವಾರ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಷೇಧಿಸಲ್ಪಟ್ಟ ಮದ್ಯವೇ ಸಾವಿಗೆ ಕಾರಣ ಎಂದು ಪ್ರಾಥಮಿಕ ಮಾಹಿತಿ ದೊರಕಿದೆ. ಮರಣೋತ್ತರ ಪರೀಕ್ಷೆಯ ನಂತರವೇ ನಿಖರ ಮಾಹಿತಿ ಗೊತ್ತಾಗಲಿದೆ. ಮದ್ಯ ಮತ್ತು ಹೋಮಿಯೋಪಥಿಗೆ ಸಂಬಂಧಿಸಿದ ಔಷಧದ ಬಾಟಲ್ಗಳನ್ನು ಕೂಡಾ ಸ್ಥಳದಿಂದ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.