ಪಾಟ್ನಾ (ಬಿಹಾರ): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಏಪ್ರಿಲ್ 5ರ ವರೆಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳ ವೈದ್ಯರ, ಆರೋಗ್ಯ ಕಾರ್ಯಕರ್ತ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯ ರಜೆಯನ್ನು ಬಿಹಾರ ಸರ್ಕಾರ ರದ್ದು ಮಾಡಿದೆ.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಈಗಾಗಲೇ ಮತ್ತೆ ಕ್ವಾರಂಟೈನ್ ಕೇಂದ್ರಗಳನ್ನು ತೆರೆಯಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ತುರ್ತು ಪರಿಸ್ಥಿತಿ ಎದುರಾದರೆ ವೈದ್ಯಕೀಯ ಸಿಬ್ಬಂದಿ ರಜೆ ರಹಿತ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಏಪ್ರಿಲ್ 5ರ ವರೆಗೆ ಅವರ ರಜೆ ರದ್ದು ಮಾಡಿರುವುದಾಗಿ ಸರ್ಕಾರ ತಿಳಿಸಿದೆ.