ಪಟ್ನಾ:ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಾವಳಿ ತಾಂಡವವಾಡುತ್ತಿದ್ದು, ಇದಕ್ಕೆ ಪ್ರತಿದಿನ ಸಾವಿರಾರು ಜನರು ಸಾವನ್ನಪ್ಪುತ್ತಿದ್ದಾರೆ. ಇದೀಗ ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೂಡ ಡೆಡ್ಲಿ ವೈರಸ್ಗೆ ಬಲಿಯಾಗಿದ್ದಾರೆ.
ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ಕುಮಾರ್ ಸಿಂಗ್ ಬಲಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅರುಣ್ ಕುಮಾರ್ ಸಿಂಗ್ ಭಾರತೀಯ ನಾಗರಿಕ ಸೇವೆಯ 1985ರ ಬ್ಯಾಚ್ನ ಅಧಿಕಾರಿಯಾಗಿದ್ದರು. ಫೆಬ್ರವರಿ 27,2021ರಂದು ಬಿಹಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.