ಪಾಟ್ನಾ(ಬಿಹಾರ): ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿ ಸಂಸಾರ ನಡೆಸುತ್ತಿರುವ ಜೋಡಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಅನೇಕ ನಿದರ್ಶನಗಳು ನಮ್ಮ ಕಣ್ಮುಂದೆ ಇವೆ. ಇದರ ಮಧ್ಯೆ ಅಂತಹ ಮತ್ತೊಂದು ಪ್ರಕರಣ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮಗಳು ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿದ್ದು, ವರ್ಷದ ಬಳಿಕ ಅಳಿಯನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಬಿಹಾರದ ಬಕ್ಸರ್ ಜಿಲ್ಲೆಯ ದುಮ್ರಾವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕ್ಷೌರಿಕರ ಅಂಗಡಿಯಲ್ಲಿ ಶೇವ್ ಮಾಡಿಸಿಕೊಳ್ಳಲು ಕುಳಿತುಕೊಂಡಿದ್ದ ವೇಳೆ ಈ ಘಟನೆ ನಡೆದಿದ್ದು, ಮಗನ ಸಹಾಯದಿಂದ ವ್ಯಕ್ತಿ ತನ್ನ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.