ದೌಸಾ (ರಾಜಸ್ಥಾನ್): ಬಿಹಾರದಿಂದ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ರಾಜಸ್ಥಾನದಲ್ಲಿ ಮೂರು ವರ್ಷದ ಬಳಿಕ ಪೊಲೀಸರು ರಕ್ಷಿಸಿದ್ದಾರೆ.
ಬಿಹಾರದ ಜಿಹಾನಾಬಾದ್ನಿಂದ 2018ರಲ್ಲಿ ಅಪಹರಣಕ್ಕೊಳಗಾಗಿದ್ದ ಅಪ್ರಾಪ್ತೆ ಕುರಿತು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಪೊಲೀಸರು ಈ ಪ್ರಕರಣದ ಕುರಿತು ಹೆಚ್ಚಿನ ಆಸಕ್ತಿ ತೋರಿಸಿರಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದರು.
ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಇದರಲ್ಲಿ ಇಬ್ಬರು ಪುರುಷರಾದರೆ ಓರ್ವ ಮಹಿಳೆ ಸಹ ಇದ್ದಾಳೆ. ಈಕೆ ಸಹ ಮಹಿಳೆಯರನ್ನು ಅಪಹರಿಸಿ ಮಾರಾಟ ಮಾಡುವ ಜಾಲದಲ್ಲಿ ನಿರತಳಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.