ಜಮುಯಿ, ಬಿಹಾರ :ಅಕ್ರಮ ಮರಳು ದಂಧೆ ವಿರುದ್ಧ ಕಡಿವಾಣ ಹಾಕಲು ಹೋದ ಪೊಲೀಸ್ ಅಧಿಕಾರಿಯನ್ನು ದಂಧೆಕೋರರು ಬಲಿ ತೆಗೆದುಕೊಂಡ ಘಟನೆ ಬಿಹಾರದಲ್ಲಿ ಸೋಮವಾರ ನಡೆದಿದೆ. 'ಘಟನೆ ಹೊಸದೇನಲ್ಲ, ನಡೆಯುತ್ತಿರುತ್ತವೆ' ಎಂದು ಹೇಳುವ ಮೂಲಕ ಸಚಿವರೊಬ್ಬರು ವಿವಾದ ಸೃಷ್ಟಿಸಿದ್ದಾರೆ.
ಪೊಲೀಸರು ಅಕ್ರಮ ಮರಳು ದಂಧೆ ಮೇಲೆ ಕ್ರಮಕ್ಕೆ ಪೊಲೀಸರು ಗುಂಪು ರಚಿಸಿಕೊಂಡಿದ್ದರು. ಮಂಗಳವಾರ ಬೆಳಗಿನ ಜಾವ ದಾಳಿಗೆ ಸಜ್ಜಾಗಿದ್ದರು. ಈ ವೇಳೆ ಮರಳು ತುಂಬಿದ ಟ್ರ್ಯಾಕ್ಟರ್ಗಳನ್ನು ಕಂಡ ಪೊಲೀಸರು ನಿಲ್ಲಿಸುವಂತೆ ಸಿಗ್ನಲ್ ನೀಡಲಾಯಿತು. ಆದರೆ, ಟ್ರ್ಯಾಕ್ಟರ್ ಚಾಲಕ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಪೊಲೀಸ್ ಜೀಪಿನಲ್ಲಿದ್ದ ಇನ್ಸ್ಪೆಕ್ಟರ್ ಪ್ರಭಾತ್ ರಂಜನ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬ ಪೊಲೀಸ್ ಗಾಯಗೊಂಡಿದ್ದಾನೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಚಾಲಕನನ್ನು ಬಂಧಿಸಲು ಪೊಲೀಸರು ಜಾಲ ಬೀಸಿದ್ದಾರೆ.
ಮೃತಪಟ್ಟ ಪೊಲೀಸ್ ಅಧಿಕಾರಿ ಪ್ರಭಾತ್ 2018ರ ಬ್ಯಾಚ್‌ನ ಇನ್ಸ್ಪೆಕ್ಟರ್ ಆಗಿದ್ದರು. ಪ್ರಭಾತ್ ರಂಜನ್ ಅವರನ್ನು ಜಮುಯಿ ಜಿಲ್ಲೆಯ ಗರ್ಹಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿತ್ತು. ಮರಳು ದಂಧೆಯ ವಿರುದ್ಧ ಹೋರಾಡಲು ಹೋಗಿ ಬಲಿಯಾಗಿದ್ದಾರೆ. ಈ ಘಟನೆಯಿಂದ ಪೊಲೀಸ್ ಇಲಾಖೆಯೇ ಶಾಕ್ ಆಗಿದೆ. ಜಮುಯಿ ಎಸ್ಪಿ ಶೌರ್ಯ ಸುಮನ್ ಕಠಿಣ ಕ್ರಮಕ್ಕೆ ಸೂಚಿಸಿದ್ದು, ಈ ಕುರಿತು ತನಿಖೆ ನಡೆಸಲಾಗುವುದು. ಇದರ ಹಿಂದೆ ಯಾರೇ ಇದ್ದರೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.