ನವದೆಹಲಿ:ಬೆಂಕಿ ಪೊಟ್ಟಣ ನೀಡಲಿಲ್ಲ ಎಂಬ ಕಾರಣಕ್ಕಾಗಿ ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಸೋಮವಾರ ರಾತ್ರಿ ದೆಹಲಿಯ ತೈಮೂರ್ ನಗರದಲ್ಲಿರುವ ತನ್ನ ಸಹೋದರನ ಭೇಟಿ ಮಾಡಲು ಬಿಹಾರದ ದೇವನ್ ತೆರಳುತ್ತಿದ್ದನು. ಈ ವೇಳೆ ಮದ್ಯದ ಅಮಲಿನಲ್ಲಿದ್ದ 3-4 ಜನರು ಆತನ ಬಳಿ ಬೆಂಕಿ ಪೊಟ್ಟಣ ಕೇಳಿದ್ದಾರೆ. ಈ ವೇಳೆ ಅವರಿಗೆ ಬೆಂಕಿ ಪೊಟ್ಟಣ ನೀಡಲು ನಿರಾಕರಿಸಿದ್ದು, ಇದರಿಂದ ಆಕ್ರೋಶಗೊಂಡು ಆತನ ಮೇಲೆ ದಾಳಿ ನಡೆಸಿದ್ದಾರೆ. ತಕ್ಷಣವೇ ಆತನನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.