ಪಾಟ್ನಾ:ಬಿಹಾರ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಪ್ರಾರಂಭವಾಗಿದೆ. ಮುಂಜಾನೆಯೇ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಕೋವಿಡ್-19ನಿಂದಾಗಿ ಮತಗಟ್ಟೆಗಳಲ್ಲಿ ಅಗತ್ಯ ಮುಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತದಾನಕ್ಕೂ ಮೊದಲು ಮತಗಟ್ಟೆಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ವೋಟ್ ಮಾಡಲು ಬರುತ್ತಿರುವ ಜನರು ಸಾಮಾಜಿಕ ಅಂತರ ಕಾಪಾಡಿಕೊಂಡೆ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ.
ಚುನಾವಣಾ ಆಯೋಗ ಮತಗಟ್ಟೆವೊಂದರಲ್ಲಿ 1,600 ರಿಂದ 1,000 ಮತದಾರರಿಗೆ ಹಕ್ಕು ಚಲಾಯಿಸಲು ಅನುಮತಿ ನೀಡಿದೆ. ಜೊತೆಗೆ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.
243 ವಿಧಾನಸಭಾ ಕ್ಷೇತ್ರಗಳ ಪೈಕಿ 16 ಜಿಲ್ಲೆಗಳ 78 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. 2.35 ಕೋಟಿ ಮತದಾರರು ತಮ್ಮ ಹಕ್ಕು ಹೊಂದಿದ್ದಾರೆ. 3ನೇ ಹಂತದ ಚುನಾವಣೆಯಲ್ಲಿ ಒಟ್ಟು 1204 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ಭವಿಷ್ಯ ಮತ ಪೆಟ್ಟಿಗೆ ಸೇರಲಿದೆ.