ಲಖಿಸರೈ( ಬಿಹಾರ): ಭೀಕರ ರಸ್ತೆ ಅಪಘಾತವೊಂದರಲ್ಲಿ 6 ಮಂದಿ ಸಾವನ್ನಪ್ಪಿ, ಇನ್ನಿತರರು ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರೈ ಎಂಬಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಿಪ್ರಾ ಗ್ರಾಮದ ಬಳಿ ಎಸ್ಯುವಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಹಲ್ಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.