ಗಯಾ(ಬಿಹಾರ):ಮಾಟ ಮಂತ್ರ ಮಾಡುತ್ತಿದ್ದಾಳೆ ಎಂಬ ಆರೋಪದ ಮೇಲೆ ಗುಂಪೊಂದು ದಾಳಿ ಮಾಡಿ ಮನೆಯಲ್ಲೇ ಬಟ್ಟೆಗಳನ್ನು ಸುತ್ತಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಆಘಾತಕಾರಿ ಘಟನೆ ಬಿಹಾರದ ಗಯಾದಲ್ಲಿ ಶನಿವಾರ ನಡೆದಿದೆ. ಗಯಾ ಜಿಲ್ಲೆಯ ಪಚ್ಮಾಹ್ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದಾಗ ಖಾಕಿ ಪಡೆ ಮೇಲೂ ದಾಳಿ ನಡೆಸಲಾಗಿದೆ.
ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅಸಹಜವಾಗಿ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಗುಂಪೊಂದು ಇದಕ್ಕೆ ಮಹಿಳೆಯೇ ಕಾರಣ ಎಂದು ಆರೋಪಿಸಿದ್ದಾರೆ. ಈಕೆ ಮಂತ್ರ ವಿದ್ಯೆ ಕಲಿತಿದ್ದು, ಅದರ ಪ್ರಯೋಗದಿಂದ ವ್ಯಕ್ತಿ ಸಾವಿಗೀಡಾಗಿದ್ದಾನೆ ಎಂದು, ಆಕೆ ಮನೆಯಲ್ಲಿದ್ದ ವೇಳೆ ದಾಳಿ ಮಾಡಿದ ಗುಂಪು ಥಳಿಸಿದೆ.