ಜಲ್ಪೈಗುರಿ (ಪಶ್ಚಿಮ ಬಂಗಾಳ) :ನಿನ್ನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಈ ಘಟನಾ ಸ್ಥಳಕ್ಕೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಅಪಘಾತಕ್ಕೆ ಇಂಜಿನ್ನಲ್ಲಿನ ದೋಷವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಮೂಲ ಕಾರಣವನ್ನು ಕಂಡುಹಿಡಿಯಲು ಶಾಸನಬದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ನಾನು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.