ನವದೆಹಲಿ:ಇಂದು 'ಭಾರತ ರತ್ನ' ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 77ನೇ ಜನ್ಮದಿನಾಚರಣೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ರಾಜೀವ್ ಗಾಂಧಿ ಸಮಾಧಿ ವೀರ್ ಭೂಮಿಗೆ ತೆರಳಿದ ಕಾಂಗ್ರೆಸ್ ನಾಯಕರು ಗೌರವ ನಮನ ಸಲ್ಲಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಂದೆಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಅಧೀರ್ ರಂಜನ್ ಚೌಧರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.