ನವದೆಹಲಿ: ಮಹಾರಾಷ್ಟ್ರದಲ್ಲಿ ಸದೃಢವಾಗಿದ್ದ ಮಹಾವಿಕಾಸ್ ಆಘಾಡಿ ಮೈತ್ರಿಕೂಟದ ಸರ್ಕಾರ ಅಸ್ಥಿರಗೊಳ್ಳುತ್ತಿರುವುದಕ್ಕೆ ಬಿಜೆಪಿ ಮತ್ತು ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆ ಮತ್ತು ಇದೆಲ್ಲವನ್ನೂ ರಾಷ್ಟ್ರಪತಿ ಚುನಾವಣೆಗೋಸ್ಕರ ಮಾಡುತ್ತಿದ್ದಾರೆ ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಆದರೆ, ಬಿಜೆಪಿ ಆ ಸರ್ಕಾರವನ್ನು ಅಸ್ಥಿರಗೊಳ್ಳಿಸಲು ಪ್ರಯತ್ನಿಸುತ್ತಿದೆ. ಇದನ್ನೇ ಈ ಹಿಂದೆ ಕರ್ನಾಟಕ, ಮಧ್ಯಪ್ರದೇಶ ಮತ್ತು ಗೋವಾದಲ್ಲೂ ಅವರು ಮಾಡಿದ್ದರು. ಈಗ ಮಹಾರಾಷ್ಟ್ರದಲ್ಲೂ ತಮ್ಮ ಸರ್ಕಾರ ರಚಿಸಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.