ಮುಂಬೈ(ಮಹಾರಾಷ್ಟ್ರ):ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ ಮಹಾರಾಷ್ಟ್ರ ಸರ್ಕಾರಕ್ಕೆ ಕೊನೆಗೂ ಸಚಿವರನ್ನು ನೇಮಿಸಲಾಗಿದೆ. ಮೈತ್ರಿ ಸರ್ಕಾರದ ಶಿವಸೇನೆಯಿಂದ 9 ಮತ್ತು ಬಿಜೆಪಿಯ 9 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ಗೌಪ್ಯತೆ ಪ್ರಮಾಣ ಬೋಧಿಸಿದರು.
ಅಸಮಾಧಾನದ ಹೊಗೆ:ಬಿಜೆಪಿ- ಶಿವಸೇನೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತರಾದ ಆಕಾಂಕ್ಷಿಗಳಿಂದ ಅಸಮಾಧಾನದ ಹೊಗೆ ಎದ್ದಿದೆ. ಇದರಿಂದ ಮುನಿಸಿಕೊಂಡಿರುವ ಶಾಸಕರನ್ನು ಮನವೊಲಿಸುವ ಯತ್ನಗಳು ನಡೆಯುತ್ತಿವೆ.