ತಿರುವನಂತಪುರಂ(ಕೇರಳ) :'ಮೆಟ್ರೋ ಮ್ಯಾನ್' ಎಂದು ಹೆಸರುವಾಸಿಯಾಗಿರುವ ಇ. ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ ಕಳೆದ ಕೆಲವು ದಿನಗಳ ಹಿಂದೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು. ಇವರನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇರಳ ಬಿಜೆಪಿ ಘೋಷಣೆ ಮಾಡಿದೆ.
ಫೆ.26ರಂದು ಮಲಪ್ಪುರಂನಲ್ಲಿ ನಡೆದ ಬಿಜೆಪಿ ಯಾತ್ರೆಯಲ್ಲಿ ಅವರು ಅಧಿಕೃತವಾಗಿ ಕಮಲ ಪಕ್ಷ ಸೇರಿದ್ದರು. ಇದೀಗ ಅವರನ್ನು ಅಲ್ಲಿನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಪ್ರಕಟಿಸಿದ್ದಾರೆ. ಜತೆಗೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇರಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, 140 ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಮತದಾನ ನಡೆಯಲಿದೆ.