ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿದ್ದಾರೆ.
ಟಿಎಂಸಿ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಕರೆ: ಇಂದು ಬಂಗಾಳಕ್ಕೆ ನಡ್ಡಾ - ತೃಣಮೂಲ ಕಾಂಗ್ರೆಸ್
ಟಿಎಂಸಿ ಗೆಲುವು ಸಾಧಿಸಿದ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ಪಡೆಯಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಗಾಳಕ್ಕೆ ನಡ್ಡಾ ಭೇಟಿ
"ಚುನಾವಣಾ ಫಲಿತಾಂಶ ಬಂದ 24 ಗಂಟೆಗಳಲ್ಲಿ, ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ. ಜೊತೆಗೆ ಪಕ್ಷದ ಕಾರ್ಯಕರ್ತರ ಮನೆ ಮತ್ತು ಅಂಗಡಿಗಳು ಸಹ ಸುಟ್ಟುಹೋಗಿವೆ. ಮಮತಾ ಬ್ಯಾನರ್ಜಿ ಸೋಲು ಮತ್ತು ತೃಣಮೂಲ ಕಾಂಗ್ರೆಸ್ ಜಯಗಳಿಸಿದ ನಂತರ, ಟಿಎಂಸಿ ಗೂಂಡಾಗಳು ವಿಜಯವನ್ನು ಹಿಂಸೆ ಮತ್ತು ರಕ್ತದಿಂದ ಆಚರಿಸಲು ಪ್ರಾರಂಭಿಸಿದ್ದಾರೆ. ಬಿಜೆಪಿ ಇದನ್ನು ಖಂಡಿಸುತ್ತದೆ "ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.
ಇದನ್ನೂ ಓದಿ: ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಬಿಜೆಪಿ, ಎಬಿವಿಪಿ ಕಚೇರಿ ಧ್ವಂಸ