ಲಖನೌ(ಉತ್ತರ ಪ್ರದೇಶ):ಮುಂದಿನ ವರ್ಷ(2022) ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಭಾರತೀಯ ಜನತಾ ಪಾರ್ಟಿ, ಈಗಿನಿಂದಲೇ ಭರದ ತಯಾರಿ ನಡೆಸುತ್ತಿದೆ. ಅದಕ್ಕಾಗಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಮಾಡಿ ನಿರ್ಧಾರ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸಹಾಯಕರಾಗಿ ಗುರುತಿಸಿಕೊಂಡಿರುವ ಖ್ಯಾತ ಮಾಜಿ ಐಎಎಸ್ ಅಧಿಕಾರಿ ಮತ್ತು ಎಂಎಲ್ಸಿ ಎಕೆ ಶರ್ಮಾ ಅವರನ್ನ ಅಲ್ಲಿನ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಉತ್ತರ ಪ್ರದೇಶ ವಿಧಾನ ಪರಿಷತ್ನ ಸದಸ್ಯರಾಗಿರುವ ಎಕೆ ಶರ್ಮಾ, ಈಗಾಗಲೇ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಜತೆಗೆ ಮೋದಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದಿನಿಂದಲೂ ಉತ್ತರ ಪ್ರದೇಶ ಸಚಿವ ಸಂಪುಟದಲ್ಲಿ ಅವರಿಗೆ ಮಂತ್ರಿಗಿರಿ ನೀಡಲಿದ್ದಾರೆ ಎಂಬ ಉಹಾಪೋಹ ಕೇಳುತ್ತಲೇ ಇದ್ದವು. ಆದರೆ ಇದೀಗ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.