ಕರ್ನಾಟಕ

karnataka

ತಡರಾತ್ರಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಅಂತ್ಯ: ಒಂದೆರಡು ದಿನಗಳಲ್ಲಿ ಬಿಜೆಪಿ ಪ್ರಣಾಳಿಕೆ

ಈ ಬಾರಿ ಐದು ವಿಧಾನಸಭಾ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ದಿನದಿಂದ ದಿನಕ್ಕೆ ಚುನವಣಾ ಕಣ ರಂಗೇರುತ್ತಿದೆ. ಇನ್ನು ಚುನಾವಣಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲು ನಿನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿತ್ತು. ಈ ವೇಳೆ, ಸಾಕಷ್ಟು ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಗಿದೆ.

By

Published : Mar 18, 2021, 7:06 AM IST

Published : Mar 18, 2021, 7:06 AM IST

ತಡರಾತ್ರಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಅಂತ್ಯ
BJP Central Election Committee meeting concludes

ನವದೆಹಲಿ:ನಿನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ನಡೆಸಿದ ಸಭೆ ತಡರಾತ್ರಿ ಮುಕ್ತಾಯಗೊಂಡಿದೆ.

ತಡರಾತ್ರಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಅಂತ್ಯ

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ, ಕೈಲಾಶ್ ವಿಜಯವರ್ಗಿಯಾ ಸೇರಿದಂತೆ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು. ಸಭೆಯಲ್ಲಿ ಮುಖ್ಯವಾಗಿ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗುತ್ತಿದೆ.

ಸಭೆ ಬಳಿಕ ಮಾಧ್ಯಮಗಳೊಂದಿದೆ ಬಿಜೆಪಿ ನಾಯಕ ಬಾಬುಲ್ ಸುಪ್ರಿಯೋ ಮಾತನಾಡಿ, ಪಶ್ಚಿಮ ಬಂಗಾಳ ಚುನಾವಣೆಗೆ ಉಳಿದ ಅಭ್ಯರ್ಥಿಗಳ ಹೆಸರನ್ನು ಒಂದು ಅಥವಾ ಎರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಓದಿ: 'ಬುಲ್ಡೋಜರ್' ಎಂದೇ ಖ್ಯಾತರಾಗಿದ್ದ ತಾಂಜೇನಿಯಾದ ಅಧ್ಯಕ್ಷ ಜಾನ್ ಮಗುಫುಲಿ ನಿಧನ

ನಿನ್ನೆ ತೃಣಮೂಲ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಜನರನ್ನು ಓಲೈಸುವಲ್ಲಿ ಸಾಕಷ್ಟು ಕೊಡುಗೆಗಳನ್ನು​ ನೀಡಿದೆ. ಈ ಮೂಲಕ ಚುನಾವಣೆಯನ್ನು ಗೆಲ್ಲುವ ತಂತ್ರ ರೂಪಿಸಿದೆ.

ABOUT THE AUTHOR

...view details